Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:31 - ಪರಿಶುದ್ದ ಬೈಬಲ್‌

31 ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಪಾಪಿ ಲೊಕಾಂಚೆ ದೆವ್ ಆಯ್ಕಿನಾ, ಮನುನ್ ಅಮ್ಕಾ ಗೊತ್ತ್ ಹಾಯ್, ಜೆ ಕೊನ್ ತೆಕಾ ಮಾನ್ ದಿತಾ ತೆಂಚೆ ದೆವ್ ಆಯಿಕ್ತಾ, ಅನಿ ತೆಂಕಾ ಪಾಜೆ ಹೊಲ್ಲೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:31
41 ತಿಳಿವುಗಳ ಹೋಲಿಕೆ  

ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೋ ಆತನು ಯಾವಾಗಲೂ ಕೇಳುತ್ತಾನೆ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು.


ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”


ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.


ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.


ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನ್ನನ್ನು ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”


ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.


ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೆಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ.


ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.


“ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ.


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.


ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು. ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ. ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ’ ಎಂದು ಹೇಳಿದೆ.”


ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆದರೆ ಯೆಹೋವನು ನಿಮಗೆ ಕಿವಿಗೊಡಲಿಲ್ಲ.


ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ.


ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು.


ಹುಟ್ಟುಕುರುಡನೊಬ್ಬನನ್ನು ಯಾರಾದರೂ ಎಂದಾದರೂ ಗುಣಪಡಿಸಿರುವುದು ಇದೇ ಮೊದಲನೆ ಸಲ.


ಆದರೆ ಈಗಲೂ ಸಹ ನೀನು ಏನನ್ನೇ ಕೇಳಿಕೊಂಡರೂ ದೇವರು ನಿನಗೆ ಕೊಡುತ್ತಾನೆ ಎಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು