Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:32 - ಪರಿಶುದ್ದ ಬೈಬಲ್‌

32 ಹುಟ್ಟುಕುರುಡನೊಬ್ಬನನ್ನು ಯಾರಾದರೂ ಎಂದಾದರೂ ಗುಣಪಡಿಸಿರುವುದು ಇದೇ ಮೊದಲನೆ ಸಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹುಟ್ಟುಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹುಟ್ಟುಕುರುಡನಿಗೆ ಯಾರಾದರೂ ಕಣ್ಣು ಕೊಟ್ಟ ಸಂಗತಿಯನ್ನು ಲೋಕಾದಿಯಿಂದ ಒಬ್ಬರೂ ಕೇಳಿದ್ದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾರಾದರೂ ತೆರೆದಿದ್ದನ್ನು ಎಂದಿಗೂ ಒಬ್ಬರೂ ಕೇಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜಗ್ ರಚಲ್ಲ್ಯಾಕ್ನಾ ಅಜುನ್ ಪತರ್ ಕೊನ್ಬಿ ಎಕ್ ಕುಡ್ಡ್ಯಾಕ್ ದಿಸ್ಟ್ ದಿಲ್ಯಾನ್ ಮನುನ್ ಅಮಿ ಆಯ್ಕಲ್ಲೆ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:32
7 ತಿಳಿವುಗಳ ಹೋಲಿಕೆ  

ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.


ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.


ಇದನ್ನು ಆತನು ಪೂರ್ವಕಾಲದ ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.


“ದುಷ್ಟನ ಆನಂದವು ಬಹುಕಾಲ ಇರುವಂಥದ್ದಲ್ಲ ಎಂಬುದು ನಿನಗೆ ಗೊತ್ತೇ ಇದೆ. ಆದಾಮನನ್ನು ಸೃಷ್ಟಿಸಿದ ಕಾಲದಿಂದಲೂ ಇದು ಸತ್ಯ. ದೇವರನ್ನು ತಿರಸ್ಕರಿಸುವವನು ಅಲ್ಪಕಾಲ ಮಾತ್ರ ಸಂತೋಷದಿಂದಿರುವನು.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.


ಆ ಮನುಷ್ಯನು (ಯೇಸು) ದೇವರಿಂದಲೇ ಬಂದಿರಬೇಕು. ಆತನು ದೇವರಿಂದ ಬಂದಿಲ್ಲದಿದ್ದರೆ, ಇಂಥ ಕಾರ್ಯಗಳನ್ನು ಮಾಡಲಾಗುತ್ತಿರಲಿಲ್ಲ” ಎಂದು ಉತ್ತರಕೊಟ್ಟನು.


ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ಈ ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು