Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:34 - ಪರಿಶುದ್ದ ಬೈಬಲ್‌

34 ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ತೆನಿ, “ತಿಯಾ ಪಾಪಾತ್ ಉಪ್ಜುನ್, ಪಾಪಾತುಚ್ ಮೊಟೊ ಹೊಲ್ಲೊ, ಅಮ್ಕಾಚ್ ಶಿಕ್ವುಕ್ ಯೆತೆಯ್?” ಮನುನ್ ಜಬಾಬ್ ದಿಲ್ಯಾನಿ, ಅನಿ ತೆಕಾ ಸಿನಾಗೊಗಾತ್ನಾ ಭಾಯ್ರ್ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:34
34 ತಿಳಿವುಗಳ ಹೋಲಿಕೆ  

ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.


ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.


ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.


ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.


ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.


ಈ ಗುರುತಿಲ್ಲದೆ ಯಾರೂ ಕೊಳ್ಳುವಂತಿಲ್ಲ ಮತ್ತು ಮಾರುವಂತಿಲ್ಲ. ಈ ಗುರುತು ಏನೆಂದರೆ ಆ ಮೃಗದ ಹೆಸರು ಅಥವಾ ಅದರ ಹೆಸರಿನ ಸಂಖ್ಯೆ.


ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾವು ಹೇಳಿದುದನ್ನು ದಿಯೊತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ನಾವಂತೂ ಹುಟ್ಟು ಯೆಹೂದ್ಯರು. ನಾವು ಪಾಪಿಗಳೆನಿಸಿಕೊಂಡಿರುವ ಅನ್ಯಜನರಲ್ಲ.


ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು.


ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.


ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು. ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು.


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಈ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು.


“ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.


ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.


ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ.


“ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.


ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು