Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:1 - ಪರಿಶುದ್ದ ಬೈಬಲ್‌

1 ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನ್ಯಾಯಸ್ಥಾಪಕರು ಆಳುತ್ತಿದ್ದಾಗ ದೇಶದಲ್ಲಿ ಬರ ಬಂದದರಿಂದ ಯೆಹೂದಪ್ರಾಂತದ ಬೇತ್ಲೆಹೇವಿುನವನೊಬ್ಬನು ತನ್ನ ಹೆಂಡತಿ, ಇಬ್ಬರು ಕುಮಾರರು ಇವರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:1
26 ತಿಳಿವುಗಳ ಹೋಲಿಕೆ  

ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.


ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


ಆ ತರುಣನು ಯೆಹೂದ ಪ್ರದೇಶದ ಬೆತ್ಲೆಹೇಮನ್ನು ಬಿಟ್ಟು ವಾಸಮಾಡಲು ಬೇರೆ ಸ್ಥಳವನ್ನು ಹುಡುಕುತ್ತಿದ್ದನು. ಅವನು ಪ್ರಯಾಣ ಮಾಡುತ್ತಾ ಮೀಕನ ಮನೆಗೆ ಬಂದನು. ಮೀಕನ ಮನೆಯು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.


ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಠವಾದ ಪಟ್ಟಣಗಳನ್ನು ನಾಶಮಾಡುವೆ. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.


ಬರಗಾಲವು ದೇಶದಲ್ಲಿ ತುಂಬ ಭೀಕರವಾಗಿತ್ತು.


“ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.


ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.


“ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ಇದು ಕ್ಷಾಮದ ಬಗ್ಗೆ ಯೆರೆಮೀಯನಿಗೆ ಯೆಹೋವನು ನುಡಿದ ಸಂದೇಶ:


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಎಲೀಯನು ಅಹಾಬನನ್ನು ಭೇಟಿಮಾಡಲು ಹೋದನು. ಆಗ ಸಮಾರ್ಯದಲ್ಲಿ ಆಹಾರವಿರಲಿಲ್ಲ.


ಯೆಫ್ತಾಹನ ತರುವಾಯ ಇಬ್ಜಾನ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನನು ಬೆತ್ಲೆಹೇಮ್ ನಗರದವನು.


ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಬೆತ್ಲೆಹೇಮನ್ನು ಕಟ್ಟಿದವನಾದ ಸಲ್ಮ ಮತ್ತು ಬೇತ್ಗಾದೇರ್ ಕಟ್ಟಿದವನಾದ ಹಾರೇಫ್.


ಸಲ್ಮನ ಸಂತತಿಯವರ ಪಟ್ಟಿ: ಬೆತ್ಲೆಹೇಮಿನ ನಿವಾಸಿಗಳು, ನೆಟೋಫಾ, ಅಟರೋತ್, ಬೇತ್ಯೋವಾಬ್, ಮಾನಹತಿಯ ಅರ್ಧಜನರು, ಚೊರ್ಗಯಿತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು