ರೂತಳು 1:14 - ಪರಿಶುದ್ದ ಬೈಬಲ್14 ಅವರೆಲ್ಲರೂ ಮತ್ತೊಮ್ಮೆ ಗಟ್ಟಿಯಾಗಿ ಅತ್ತರು. ಒರ್ಫಾಳು ನೊವೊಮಿಗೆ ಮುದ್ದಿಟ್ಟು ಹೊರಟುಹೋದಳು. ಆದರೆ ರೂತಳು ಅವಳನ್ನು ಮುದ್ದಿಟ್ಟು ಆಕೆಯೊಂದಿಗೆ ಉಳಿದುಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಇದನ್ನು ಕೇಳಿ ಇನ್ನೂ ಹೆಚ್ಚಾಗಿ ಅತ್ತರು. ಅನಂತರ ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಅವರು ತಿರಿಗಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟುಹೋದಳು; ರೂತಳಾದರೋ ಅತ್ತೆಯನ್ನೇ ಅಂಟಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವರು ತಿರುಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಾ ತನ್ನ ಅತ್ತೆಯನ್ನು ಮುದ್ದಿಟ್ಟು ಹೊರಟು ಹೋದಳು; ಆದರೆ ರೂತಳು ಅತ್ತೆಯನ್ನು ಅಂಟಿಕೊಂಡಳು. ಅಧ್ಯಾಯವನ್ನು ನೋಡಿ |
ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.