ರೂತಳು 1:17 - ಪರಿಶುದ್ದ ಬೈಬಲ್17 ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣವು ಮಾತ್ರ ನಮ್ಮಿಬ್ಬರನ್ನು ಅಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದಳು. ಅಧ್ಯಾಯವನ್ನು ನೋಡಿ |
ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.