ರೂತಳು 1:3 - ಪರಿಶುದ್ದ ಬೈಬಲ್3 ಕೆಲವು ದಿನಗಳಾದ ಮೇಲೆ ನೊವೊಮಿಯ ಗಂಡನಾದ ಎಲೀಮೆಲೆಕನು ಮರಣಹೊಂದಿದನು. ನೊವೊಮಿ ಮತ್ತು ಆಕೆಯ ಇಬ್ಬರು ಗಂಡುಮಕ್ಕಳು ಅಲ್ಲಿ ತಮ್ಮ ಜೀವನವನ್ನು ಮುಂದುವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವರು ಮೋವಾಬ್ ನಾಡಿನಲ್ಲಿ ವಾಸಿಸುತ್ತಿದ್ದಾಗ ಎಲಿಮೆಲೆಕನು ಮರಣ ಹೊಂದಿದನು. ವಿಧವೆಯಾದ ನವೊಮಿ ಇಬ್ಬರು ಗಂಡುಮಕ್ಕಳೊಡನೆ ಅಲ್ಲೇ ಉಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೊವೊವಿುಯ ಗಂಡನಾದ ಎಲೀಮೆಲೆಕನು ಸತ್ತನು. ಆಕೆಯು ಇಬ್ಬರು ಮಕ್ಕಳೊಡನೆ ಉಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತುಹೋದನು. ಆಕೆಯೂ ಆಕೆಯ ಇಬ್ಬರು ಪುತ್ರರೂ ಉಳಿದರು. ಅಧ್ಯಾಯವನ್ನು ನೋಡಿ |
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.