Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:7 - ಪರಿಶುದ್ದ ಬೈಬಲ್‌

7 ಅವಳು ಮತ್ತು ಅವಳ ಸೊಸೆಯಂದಿರು ತಾವು ಈವರೆಗೆ ಇದ್ದ ಸ್ಥಳವನ್ನು ಬಿಟ್ಟು ಯೆಹೂದ ಪ್ರಾಂತಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ಅವಳು ಅಲ್ಲಿಗೆ ಹಿಂದಿರುಗಿ ಹೋಗಲು ಸಿದ್ಧತೆಮಾಡಿ ಜುದೇಯಕ್ಕೆ ಹೊರಟಳು. ಸೊಸೆಯರು ಅವಳ ಜೊತೆಯಲ್ಲೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ಹೊರಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:7
6 ತಿಳಿವುಗಳ ಹೋಲಿಕೆ  

ಏಳು ವರ್ಷಗಳು ಮುಗಿದ ನಂತರ ಆ ಸ್ತ್ರೀಯು ಫಿಲಿಷ್ಟಿಯರ ದೇಶದಿಂದ ಹಿಂದಿರುಗಿ ಬಂದಳು. ಆ ಸ್ತ್ರೀಯು ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಮತ್ತೆ ಕೊಡಿಸುವಂತೆ ಕೇಳಲು ರಾಜನ ಬಳಿಗೆ ಹೋದಳು.


ಅವರೆಲ್ಲರೂ ಮತ್ತೊಮ್ಮೆ ಗಟ್ಟಿಯಾಗಿ ಅತ್ತರು. ಒರ್ಫಾಳು ನೊವೊಮಿಗೆ ಮುದ್ದಿಟ್ಟು ಹೊರಟುಹೋದಳು. ಆದರೆ ರೂತಳು ಅವಳನ್ನು ಮುದ್ದಿಟ್ಟು ಆಕೆಯೊಂದಿಗೆ ಉಳಿದುಕೊಂಡಳು.


ಸ್ವಲ್ಪ ಸಮಯದ ನಂತರ ಮೋಶೆಯು ತನ್ನ ಮಾವನಾದ ಇತ್ರೋನನನ್ನು ಬೀಳ್ಕೊಟ್ಟನು; ಇತ್ರೋನನು ತನ್ನ ಸ್ವದೇಶಕ್ಕೆ ಹಿಂತಿರುಗಿಹೋದನು.


ಅವಳ ಸೊಸೆಯಂದಿರು, “ನಾವು ನಿನ್ನ ಸಂಗಡ ಬಂದು ನಿನ್ನ ಜನರೊಡನೆ ಇರುತ್ತೇವೆ” ಎಂದರು.


ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದ್ದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು.


ಆಗ ನೊವೊಮಿ ತನ್ನ ಸೊಸೆಯಂದಿರಿಗೆ, “ನೀವಿಬ್ಬರೂ ನಿಮ್ಮ ತಂದೆತಾಯಿಗಳ ಮನೆಗೆ ಹೋಗಿ. ನೀವು ನನ್ನನ್ನೂ ಸತ್ತುಹೋದ ನನ್ನ ಇಬ್ಬರು ಮಕ್ಕಳನ್ನೂ ತುಂಬ ಪ್ರೀತಿಯಿಂದ ನೋಡಿಕೊಂಡಿದ್ದೀರಿ. ಯೆಹೋವನು ನಿಮಗೆ ಅಷ್ಟೇ ಕೃಪೆಯನ್ನೂ ಪ್ರೀತಿಯನ್ನೂ ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು