ರೂತಳು 1:9 - ಪರಿಶುದ್ದ ಬೈಬಲ್9 ನೀವಿಬ್ಬರೂ ಮದುವೆ ಮಾಡಿಕೊಂಡು ಒಳ್ಳೆಯ ಕುಟುಂಬವನ್ನು ಹೊಂದಿಕೊಳ್ಳಲು ಯೆಹೋವನು ನಿಮಗೆ ಸಹಾಯಮಾಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಹೇಳಿ ತನ್ನ ಸೊಸೆಯಂದಿರಿಗೆ ಮುದ್ದಿಟ್ಟಳು. ಅವರೆಲ್ಲರೂ ಅಳತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ನಿಮಗೂ ಹಾಗೆಯೇ ಒಳಿತನ್ನು ಮಾಡಲಿ. ನೀವಿಬ್ಬರೂ ಪುನಃ ಮದುವೆಯಾಗಿ ಸುಖವಾಗಿರುವಂತೆ ಅನುಗ್ರಹಿಸಲಿ!” ಎಂದು ಹರಸಿ ಅವರನ್ನು ಬೀಳ್ಕೊಡುತ್ತಾ ಮುದ್ದಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ವಿಶ್ರಾಂತಿಯಿಂದಿರುವಂತೆ ಯೆಹೋವನು ಅನುಗ್ರಹಿಸಲಿ ಎಂದು ಹೇಳಿ ಅವರನ್ನು ಮುದ್ದಿಟ್ಟಳು. ಆಗ ಅವರು ಗಟ್ಟಿಯಾಗಿ ಅತ್ತು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಮದುವೆಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದುವಂತೆ, ಯೆಹೋವ ದೇವರು ಆಶೀರ್ವದಿಸಲಿ,” ಎಂದು ಹೇಳಿದಳು. ನಂತರ ನೊವೊಮಿಯು ಅವರಿಗೆ ಮುದ್ದಿಟ್ಟಳು. ಅಧ್ಯಾಯವನ್ನು ನೋಡಿ |