ರೂತಳು 2:10 - ಪರಿಶುದ್ದ ಬೈಬಲ್10 ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ರೂತಳು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ - ಪರದೇಶಿಯಾದ ನನ್ನಲ್ಲಿ ಇಷ್ಟು ಕಟಾಕ್ಷವೇಕೆ ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು. ಅಧ್ಯಾಯವನ್ನು ನೋಡಿ |
ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.