Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:13 - ಪರಿಶುದ್ದ ಬೈಬಲ್‌

13 ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಆಕೆಯು - ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತಾಡಿಸಿದಿರಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:13
15 ತಿಳಿವುಗಳ ಹೋಲಿಕೆ  

ಹನ್ನಳು, “ನನ್ನ ಮೇಲೆ ನಿಮ್ಮ ದಯೆಯಿರಲಿ” ಎಂದು ಹೇಳಿದಳು. ಆಗ ಅವಳು ತನ್ನ ಮಾರ್ಗದಲ್ಲಿಯೇ ಹಿಂದಿರುಗಿ. ಸ್ವಲ್ಪ ಊಟ ಮಾಡಿದಳು. ಅಂದಿನಿಂದ ಅವಳು ದುಃಖಿತಳಾಗಲಿಲ್ಲ.


ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು. ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿಕೊಟ್ಟೆನು” ಎಂದು ಹೇಳಿದನು.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಚೀಬನು, “ನಾನು ನಿನಗೆ ಸಾಷ್ಟಾಂಗನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.


ಅಬೀಗೈಲಳು ಸಾಷ್ಟಾಂಗನಮಸ್ಕಾರಮಾಡಿ, “ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ” ಎಂದಳು.


ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.


ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.


ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.


ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.


ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.


ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.


ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.


ಇವು ಯೆಹೋವನ ಮಾತುಗಳು. “ಆಗ ನನ್ನನ್ನು ನೀನು ‘ನನ್ನ ಗಂಡ’ ಎಂದು ಕರೆಯುವೆ. ‘ನನ್ನ ಬಾಳನು’ ಎಂದು ಕರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು