ರೂತಳು 2:14 - ಪರಿಶುದ್ದ ಬೈಬಲ್14 ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಊಟದ ಸಮಯದಲ್ಲಿ ಬೋವಜನು ರೂತಳನ್ನು ಕರೆದು, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ದ್ರಾಕ್ಷಾರಸದಲ್ಲಿ ಅದ್ದಿ ತಿನ್ನು,” ಎಂದನು. ಆಕೆ ಕೊಯ್ಯುವವರ ಸಂಗಡ ಕುಳಿತುಕೊಂಡಳು. ಇದಲ್ಲದೆ ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಅವಳು ತೃಪ್ತಿಯಾಗಿ ಊಟಮಾಡಿ ಇನ್ನೂ ಸ್ವಲ್ಪ ಉಳಿಸಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಊಟದ ವೇಳೆಯಾದಾಗ ಬೋವಜನು - ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು ಎಂದು ಕರೆಯಲು ಆಕೆಯು ಹೋಗಿ ಕೊಯ್ಯುವವರ ಬಳಿಯಲ್ಲಿ ಕೂತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಟ್ಟುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಊಟದ ವೇಳೆಯಲ್ಲಿ ಬೋವಜನು ಅವಳಿಗೆ, “ಇಲ್ಲಿ ಹತ್ತಿರ ಬಂದು ರೊಟ್ಟಿ ತಿಂದು ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು,” ಎಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು, ಇನ್ನೂ ಉಳಿಸಿಕೊಂಡಳು. ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”
ಅವರು, “ಅರಣ್ಯದಲ್ಲಿ ಪ್ರಯಾಣಮಾಡಿ ಜನರು ದಣಿದಿದ್ದಾರೆ, ಹಸಿದಿದ್ದಾರೆ ಮತ್ತು ದಾಹಗೊಂಡಿದ್ದಾರೆ” ಎಂದು ಹೇಳಿ, ದಾವೀದನಿಗೂ ಅವನ ಜನರಿಗೂ ತಿನ್ನಲು ಅನೇಕ ಆಹಾರಪದಾರ್ಥಗಳನ್ನು ತಂದರು. ಅವರು ಹಾಸಿಗೆಗಳನ್ನು, ಬಟ್ಟಲುಗಳನ್ನು ಮತ್ತು ಮಡಕೆಕುಡಿಕೆಗಳನ್ನು, ಗೋಧಿ, ಬಾರ್ಲಿ, ಹಿಟ್ಟು, ಹುರಿದಕಾಳುಗಳು, ಅವರೆ, ಅಲಸಂದಿ, ಒಣಗಿಸಿದ ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿ ಮತ್ತು ಹಸುವಿನ ಹಾಲಿನಿಂದ ಮಾಡಿದ ಗಿಣ್ಣು ಇವುಗಳನ್ನು ತಂದುಕೊಟ್ಟರು.