ರೂತಳು 2:19 - ಪರಿಶುದ್ದ ಬೈಬಲ್19 ಅವಳ ಅತ್ತೆಯು ಅವಳಿಗೆ, “ಈ ಧಾನ್ಯವನ್ನೆಲ್ಲಾ ನೀನು ಎಲ್ಲಿಂದ ಶೇಖರಿಸಿದೆ? ನೀನು ಎಲ್ಲಿ ಕೆಲಸ ಮಾಡಿದೆ? ನಿನಗೆ ಸಹಾಯ ಮಾಡಿದ ಮನುಷ್ಯನಿಗೆ ಶುಭವಾಗಲಿ” ಎಂದಳು. ಅದಕ್ಕೆ ರೂತಳು, “ನಾನು ಇಂದು ಯಾರ ಹತ್ತಿರ ಕೆಲಸ ಮಾಡಿದೆನೋ ಆ ಮನುಷ್ಯನ ಹೆಸರು ಬೋವಜ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದನ್ನು ನೋಡಿ ನವೊಮಿ, “ನೀನು ಈ ದಿನ ಎಲ್ಲಿ ಹಕ್ಕಲಾಯ್ದೆ? ಯಾರ ಹೊಲದಲ್ಲಿ ಕೆಲಸಮಾಡಿದೆ? ನಿನಗೆ ದಯೆ ತೋರಿಸಿದವನಿಗೆ ಶುಭವಾಗಲಿ!” ಎಂದಳು. ಅದಕ್ಕೆ ರೂತಳು, “ನಾನು ತೆನೆ ಆಯ್ದುಕೊಂಡ ಹೊಲವು ಬೋವಜನದು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅತ್ತೆಯು - ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ ಎನ್ನಲು ರೂತಳು - ನಾನು ಯಾವನ ಹೊಲದಲ್ಲಿ ಹಕ್ಕಲಾಯ್ದೆನೋ ಅವನ ಹೆಸರು ಬೋವಜನೆಂದು ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ರೂತಳ ಅತ್ತೆಯು ಆಕೆಗೆ, “ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡೆ? ಎಲ್ಲಿ ಕೆಲಸಮಾಡಿದೆ? ನಿನ್ನನ್ನು ಪರಾಮರಿಸಿದವನಿಗೆ ಆಶೀರ್ವಾದವಾಗಲಿ,” ಎಂದಳು. ಅದಕ್ಕವಳು ತಾನು ಯಾರ ಹತ್ತಿರ ಕೆಲಸಮಾಡಿದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ, “ನಾನು ಈ ಹೊತ್ತು ಕೆಲಸ ಮಾಡಿದವನ ಹೆಸರು ಬೋವಜ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |