ರೂತಳು 2:20 - ಪರಿಶುದ್ದ ಬೈಬಲ್20 ನೊವೊಮಿಯು ತನ್ನ ಸೊಸೆಗೆ, “ಯೆಹೋವನು ಅವನಿಗೆ ಕೃಪೆತೋರಲಿ. ಯೆಹೋವನು ಸತ್ತುಹೋದವರಿಗೂ ಬದುಕಿರುವವರಿಗೂ ದಯೆತೋರಿಸುತ್ತಾನೆ” ಎಂದು ಹೇಳಿದಳು. ಆಮೇಲೆ ನೊವೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬನಲ್ಲದೆ ನಮ್ಮ ಸಮೀಪದ ಬಂಧುವೂ ನಮ್ಮ ಸಂರಕ್ಷಕನೂ ಆಗಿದ್ದಾನೆ” ಎಂದು ತಿಳಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ನೊವೊವಿುಯು - ಸತ್ತವರಿಗೂ ಬದುಕುವವರಿಗೂ ಬಿಡದೆ ದಯೆತೋರಿಸುತ್ತಿರುವ ಇವನು ಯೆಹೋವನಿಂದ ಆಶೀರ್ವಾದ ಹೊಂದಲಿ ಎಂದು ಹೇಳಿ, ಆ ಮನುಷ್ಯನು ತಮ್ಮ ಸಂಬಂಧಿಕನೆಂದೂ ಸಮೀಪಬಂಧುಗಳಲ್ಲೊಬ್ಬನೆಂದೂ ರೂತಳಿಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೊವೊಮಿ ತನ್ನ ಸೊಸೆಗೆ, “ಜೀವಂತ ಇರುವವರಿಗೂ ಸತ್ತವರಿಗೂ ದಯೆ ತೋರಿಸುತ್ತಿರುವ ಯೆಹೋವ ದೇವರಿಂದ ಅವನಿಗೆ ಆಶೀರ್ವಾದವಾಗಲಿ,” ಎಂದಳು. ಅನಂತರ ನೊವೊಮಿ ಅವಳಿಗೆ, “ಆ ಮನುಷ್ಯನು ನಮ್ಮ ಬಂಧುವೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ,” ಎಂದಳು. ಅಧ್ಯಾಯವನ್ನು ನೋಡಿ |
ನಾನು ಇದರ ಬಗ್ಗೆ ನಿನಗೆ ಈ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಆ ಹೊಲವನ್ನು ಕೊಂಡುಕೊಳ್ಳ ಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಆ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು ಕೊಂಡುಕೊಳ್ಳುತ್ತೇನೆ.” ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು.