Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:22 - ಪರಿಶುದ್ದ ಬೈಬಲ್‌

22 ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿ ಹೋಗುವುದೇ ಒಳ್ಳೆಯದು. ನೀನು ಬೇರೆ ಹೊಲಕ್ಕೆ ಹೋದರೆ ನಿನಗೆ ತೊಂದರೆಯಾಗಬಹುದು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ನವೊಮಿ ತನ್ನ ಸೊಸೆಗೆ, “ಹೌದು, ಮಗಳೇ, ನೀನು ಆತನ ಹೆಣ್ಣಾಳುಗಳ ಸಂಗಡ ಇರುವುದೇ ಒಳ್ಳೆಯದು; ಬೇರೆಯವರ ಹೊಲದಲ್ಲಿ ನಿನಗೆ ತೊಂದರೆಯಾದೀತು,” ಎಂದು ಸಲಹೆಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೊವೊವಿುಯು ತನ್ನ ಸೊಸೆಯಾದ ರೂತಳಿಗೆ - ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವದು ಒಳ್ಳೇದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿಗಳ ಸಂಗಡ ಹೊರಟುಹೋಗುವುದು ಒಳ್ಳೆಯದು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:22
5 ತಿಳಿವುಗಳ ಹೋಲಿಕೆ  

ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು. ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.


ಆ ಸಮಯದಲ್ಲಿ ಪೇತ್ರನು ಇನ್ನೂ ಅಂಗಳದಲ್ಲಿದ್ದನು. ಪ್ರಧಾನಯಾಜಕನ ದಾಸಿಯಾಗಿದ್ದ ಹುಡುಗಿಯೊಬ್ಬಳು ಪೇತ್ರನ ಬಳಿಗೆ ಬಂದಳು.


ಅದಕ್ಕೆ ರೂತಳು, “ಸುಗ್ಗಿಕಾಲ ಮುಗಿಯುವವರೆಗೂ ತನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಹೋಗಬೇಕೆಂದು ಬೋವಜನು ನನಗೆ ಹೇಳಿದ್ದಾನೆ” ಎಂದು ಹೇಳಿದಳು.


ರೂತಳು ಬೋವಜನ ಹೆಣ್ಣಾಳುಗಳ ಜೊತೆಯಲ್ಲಿದ್ದುಕೊಂಡು ಗೋಧಿಯ ಮತ್ತು ಜವೆಗೋಧಿಯ ಸುಗ್ಗಿಕಾಲ ಮುಗಿಯುವವರೆಗೂ ಹಕ್ಕಲಾಯುತ್ತಿದ್ದಳು. ರೂತಳು ತನ್ನ ಅತ್ತೆಯಾದ ನೊವೊಮಿಯ ಸಂಗಡ ಮನೆಯಲ್ಲಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು