ರೂತಳು 2:4 - ಪರಿಶುದ್ದ ಬೈಬಲ್4 ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಬೋವಜನು ಬೇತ್ಲೆಹೇವಿುನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ - ಯೆಹೋವನು ನಿಮ್ಮ ಸಂಗಡ ಇರಲಿ ಅಂದನು. ಅವರು - ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.