Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:13 - ಪರಿಶುದ್ದ ಬೈಬಲ್‌

13 ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ರಾತ್ರಿ ಇಲ್ಲೇ ಇರು. ಅವನು ನಿನ್ನನ್ನು ಸಲಹುವ ಜವಾಬ್ದಾರಿ ವಹಿಸಿಕೊಳ್ಳುವನೋ ಇಲ್ಲವೋ ಎಂಬುದನ್ನು ನಾಳೆ ವಿಚಾರಿಸಿಕೊಳ್ಳೋಣ. ಅವನು ಅದನ್ನು ವಹಿಸಿಕೊಳ್ಳುವುದಾದರೆ ಒಳ್ಳೆಯದು. ಇಲ್ಲವಾದರೆ ನಾನೇ ಆ ಕರ್ತವ್ಯವನ್ನು ವಹಿಸಿಕೊಳ್ಳುತ್ತೇನೆ ಎಂದು ಜೀವಸ್ವರೂಪರಾದ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಇನ್ನು ನಿಶ್ಚಿಂತಳಾಗಿ ಮಲಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನಡಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನಡಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈ ರಾತ್ರಿಯಲ್ಲಿ ಇಲ್ಲಿರು. ನಾಳೆ ಬೆಳಿಗ್ಗೆ ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಿದರೆ ಒಳ್ಳೆಯದು. ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಲು ಮನಸ್ಸಿಲ್ಲದಿದ್ದರೆ ಯೆಹೋವ ದೇವರ ಜೀವದಾಣೆ, ನಾನೇ ಅದನ್ನು ಮಾಡುವೆನು. ಉದಯಕಾಲದವರೆಗೂ ಇಲ್ಲಿಯೇ ಮಲಗಿರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:13
11 ತಿಳಿವುಗಳ ಹೋಲಿಕೆ  

ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ಅದಕ್ಕೆ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಂಡರೆ ಸತ್ತವನ ಹೆಂಡತಿಯೂ ಮೋವಾಬ್ಯಳೂ ಆಗಿರುವ ರೂತಳನ್ನು ಸಹ ನೀನು ಮದುವೆಯಾಗಬೇಕು. ರೂತಳಿಗೆ ಜನಿಸುವ ಮಗನು ಆ ಹೊಲಕ್ಕೆ ಹಕ್ಕುದಾರನಾಗುವನು. ಹೀಗೆ ಈ ಭೂಮಿಯು ಸತ್ತು ಹೋದವನ ಕುಟುಂಬದಲ್ಲಿಯೇ ಇದ್ದು ಅವನ ಹೆಸರಿನಲ್ಲಿಯೇ ಮುಂದುವರಿಯುವುದು” ಎಂದು ಹೇಳಿದನು.


ನೊವೊಮಿಯು ತನ್ನ ಸೊಸೆಗೆ, “ಯೆಹೋವನು ಅವನಿಗೆ ಕೃಪೆತೋರಲಿ. ಯೆಹೋವನು ಸತ್ತುಹೋದವರಿಗೂ ಬದುಕಿರುವವರಿಗೂ ದಯೆತೋರಿಸುತ್ತಾನೆ” ಎಂದು ಹೇಳಿದಳು. ಆಮೇಲೆ ನೊವೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬನಲ್ಲದೆ ನಮ್ಮ ಸಮೀಪದ ಬಂಧುವೂ ನಮ್ಮ ಸಂರಕ್ಷಕನೂ ಆಗಿದ್ದಾನೆ” ಎಂದು ತಿಳಿಸಿದಳು.


ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.


ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದೆ ಇದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ನಾನು ಹತ್ತಿರದ ಸಂಬಂಧಿ ಎಂಬುದು ನಿಜ. ಆದರೆ ನನಗಿಂತಲೂ ಹತ್ತಿರದ ಸಂಬಂಧಿ ಇನ್ನೊಬ್ಬನಿದ್ದಾನೆ.


ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.


ಅದಕ್ಕೆ ಆ ಸಮೀಪಬಂಧುವು, “ನಾನು ಆ ಹೊಲವನ್ನು ಕೊಂಡುಕೊಳ್ಳಲಾರೆ. ಆ ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದುವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲವನ್ನೇ ಕಳೆದುಕೊಳ್ಳಬೇಕಾಗುವುದು. ಆದ್ದರಿಂದ ನೀನೇ ಆ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು