Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:14 - ಪರಿಶುದ್ದ ಬೈಬಲ್‌

14 ರೂತಳು ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲಿರುವಾಗಲೇ ಎದ್ದಳು. ಬೋವಜನು ಅವಳಿಗೆ, “ನೀನು ನಿನ್ನೆ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯು ರಹಸ್ಯವಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬುವುದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತು ಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತುಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:14
8 ತಿಳಿವುಗಳ ಹೋಲಿಕೆ  

ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.


ನೀನು ಯಾವುದನ್ನು ಒಳ್ಳೆಯದೆಂದು ಆಲೋಚಿಸುವಿಯೋ ಅದು ಬೇರೆಯವರಿಂದ ಕೆಟ್ಟದ್ದು ಎಂಬ ಟೀಕೆಗೆ ಒಳಗಾಗದಂತೆ ಎಚ್ಚರವಹಿಸು.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.


ಎಲ್ಲಾ ವಿಧವಾದ ಕೆಟ್ಟತನದಿಂದ ದೂರವಾಗಿರಿ.


ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.


ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ.


ಬೋವಜನು, “ನಿನ್ನ ಹೊದಿಕೆಯನ್ನು ಇಲ್ಲಿ ತೆಗೆದುಕೊಂಡು ಬಾ. ಅದನ್ನು ಸ್ವಲ್ಪ ಅಗಲಮಾಡಿ ಹಿಡಿದುಕೋ” ಎಂದನು. ರೂತಳು ತನ್ನ ಹೊದಿಕೆಯನ್ನು ಅಗಲಮಾಡಿ ಹಿಡಿದಳು. ಬೋವಜನು ಆರು ಸೇರಿನಷ್ಟು ಜವೆಗೋಧಿಯನ್ನು ಅದರಲ್ಲಿ ಸುರಿದು ಚೆನ್ನಾಗಿ ಕಟ್ಟಿ ಅವಳ ಮೇಲೆ ಹೊರಿಸಿದನು. ಬಳಿಕ ಆಕೆ ಊರೊಳಗೆ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು