Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:15 - ಪರಿಶುದ್ದ ಬೈಬಲ್‌

15 ಬೋವಜನು, “ನಿನ್ನ ಹೊದಿಕೆಯನ್ನು ಇಲ್ಲಿ ತೆಗೆದುಕೊಂಡು ಬಾ. ಅದನ್ನು ಸ್ವಲ್ಪ ಅಗಲಮಾಡಿ ಹಿಡಿದುಕೋ” ಎಂದನು. ರೂತಳು ತನ್ನ ಹೊದಿಕೆಯನ್ನು ಅಗಲಮಾಡಿ ಹಿಡಿದಳು. ಬೋವಜನು ಆರು ಸೇರಿನಷ್ಟು ಜವೆಗೋಧಿಯನ್ನು ಅದರಲ್ಲಿ ಸುರಿದು ಚೆನ್ನಾಗಿ ಕಟ್ಟಿ ಅವಳ ಮೇಲೆ ಹೊರಿಸಿದನು. ಬಳಿಕ ಆಕೆ ಊರೊಳಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅವನು ಆಕೆಗೆ “ನಿನ್ನ ಮೇಲ್ಹೊದಿಕೆಯನ್ನು ಹಾಸು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬೋವಜನು ಆಕೆಗೆ, “ನಿನ್ನ ಮೇಲ್ಹೊದಿಕೆಯನ್ನು ಹಾಸು,” ಎಂದು ಹೇಳಿ ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂನಷ್ಟು ಜವೆಗೋದಿಯನ್ನು ಸುರಿದು, ಅದನ್ನೆತ್ತಿ ಹೊರಿಸಿದನು. ಆಕೆ ಅದನ್ನು ಹೊತ್ತುಕೊಂಡು ಊರೊಳಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಅವನು ಆಕೆಗೆ - ನಿನ್ನ ಕಂಬಳಿಯನ್ನು ಹಾಸು ಎಂದು ಹೇಳಿ ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿದನು. ಆಕೆಯು ಊರೊಳಕ್ಕೆ ಹೋಗಿ ಅತ್ತೆಯ ಬಳಿಗೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು, “ನಿನ್ನ ಮೇಲ್ಹೊದಿಕೆಯನ್ನು ಹಿಡಿ,” ಎಂದನು. ಅವಳು ಅದನ್ನು ಹಿಡಿದಾಗ ಅವನು ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಅವಳು ಅದನ್ನು ಹೊತ್ತುಕೊಂಡು ಪಟ್ಟಣಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:15
5 ತಿಳಿವುಗಳ ಹೋಲಿಕೆ  

ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ರೂತಳು ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲಿರುವಾಗಲೇ ಎದ್ದಳು. ಬೋವಜನು ಅವಳಿಗೆ, “ನೀನು ನಿನ್ನೆ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯು ರಹಸ್ಯವಾಗಿರಲಿ” ಎಂದು ಹೇಳಿದನು.


ರೂತಳು ತನ್ನ ಅತ್ತೆಯಾದ ನೊವೊಮಿಯ ಮನೆಗೆ ಬಂದಳು. ನೊವೊಮಿಯು ಆಕೆಗೆ, “ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು?” ಎಂದು ಕೇಳಿದಳು. ರೂತಳು ನಡೆದ ಸಂಗತಿಯನ್ನೂ ಬೋವಜನು ತನಗೆ ಹೇಳಿದ್ದನ್ನೂ ಅತ್ತೆಗೆ ತಿಳಿಸಿದಳು.


ಕೈಗನ್ನಡಿಗಳನ್ನು, ಪೋಷಾಕುಗಳನ್ನು, ಮುಂಡಾಸಗಳನ್ನು ಮತ್ತು ಉದ್ದವಾದ ಶಾಲುಗಳನ್ನು ಅವರಿಂದ ತೆಗೆದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು