3 ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ಒಳ್ಳೆಯ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ತಿಂದು ಕುಡಿದು ತೀರಿಸುವವರೆಗೂ ಅವನಿಗೆ ನೀನು ಅಲ್ಲಿರುವದು ಅವನಿಗೆ ತಿಳಿಯದಿರಲಿ.
ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
ಊಟವಾದ ಮೇಲೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕಾಗಿ ಅವನು ಮಲಗುತ್ತಾನೆ. ಅವನು ಎಲ್ಲಿ ಮಲಗುತ್ತಾನೆಂಬುದನ್ನು ನೋಡಿಕೊಂಡಿದ್ದು ಅಲ್ಲಿಗೆ ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅಲ್ಲಿಯೇ ಮಲಗಿಕೋ. ನೀನು ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುತ್ತಾನೆ” ಎಂದಳು.
ಆಗ ದಾವೀದನು ನೆಲದಿಂದ ಮೇಲಕ್ಕೆದ್ದನು. ಅವನು ತನ್ನನ್ನು ಶುಚಿಗೊಳಿಸಿಕೊಂಡನು. ಅವನು ತನ್ನ ಬಟ್ಟೆಗಳನ್ನು ಬದಲಿಸಿ ಬೇರೆ ಬಟ್ಟೆಗಳನ್ನು ಧರಿಸಿದನು. ನಂತರ ಅವನು ಯೆಹೋವನನ್ನು ಆರಾಧಿಸುವುದಕ್ಕಾಗಿ ಆತನ ಆಲಯಕ್ಕೆ ಹೋದನು. ಅವನು ಮನೆಗೆ ಹೋಗಿ ತಿನ್ನಲು ಏನನ್ನಾದರೂ ಕೊಡುವಂತೆ ಕೇಳಿದನು. ಅವನ ಸೇವಕರು ಕೊಟ್ಟ ಸ್ವಲ್ಪ ಆಹಾರವನ್ನು ಅವನು ತಿಂದನು.