7 ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು.
7 ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.
7 ಇತ್ತ ಬೋವಜನು ಅನ್ನಪಾನ ಮಾಡಿ ಸಂತುಷ್ಟನಾಗಿದ್ದನು. ಅನಂತರ ಜವೆಗೋದಿಯ ರಾಶಿಯ ಬಳಿ ಹೋಗಿ ಮಲಗಿಕೊಂಡನು. ರೂತಳು ನಿಶ್ಯಬ್ಧವಾಗಿ ಅವನ ಬಳಿಗೆ ಹೋದಳು. ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ಮೆತ್ತಗೆ ಸರಿಸಿ, ಅಲ್ಲೇ ಮಲಗಿಕೊಂಡಳು. ಸುಮಾರು ನಡುರಾತ್ರಿಯಲ್ಲಿ ಅವನಿಗೆ ತಟ್ಟನೆ ಎಚ್ಚರವಾಯಿತು. ಬಗ್ಗಿ ನೋಡಿದಾಗ ಸ್ತ್ರೀಯೊಬ್ಬಳು ಪಾದಗಳ ಬಳಿ ಮಲಗಿರುವುದನ್ನು ಕಂಡು ಚಕಿತಗೊಂಡು, “ನೀನು ಯಾರು?” ಎಂದು ಕೇಳಿದನು.
7 ಬೋವಜನು ತಿಂದು ಕುಡಿದು ಸಂತುಷ್ಟನಾಗಿದ್ದನು. ಅವನು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿಕೊಂಡನು. ಆಗ ರೂತಳು ಮೆಲ್ಲಗೆ ಬಂದು ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ತೆಗೆದು ಮಲಗಿಕೊಂಡಳು.
ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.
ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು.
ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.
ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.
ಈಜೆಬೆಲಳು, “ನೀನು ಇಸ್ರೇಲಿಗೆಲ್ಲ ರಾಜ! ನಿನ್ನ ಹಾಸಿಗೆಯಿಂದ ಎದ್ದು ಬಾ. ನೀನು ಸ್ವಲ್ಪ ಊಟಮಾಡಿ, ಸಂತೋಷದಿಂದಿರು. ನಾನು ನಿನಗೆ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.
ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.
ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು.
ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.