ರೂತಳು 4:10 - ಪರಿಶುದ್ದ ಬೈಬಲ್10 ಮೋವಾಬ್ಯಳೂ ಮಹ್ಲೋನನ ಹೆಂಡತಿಯೂ ಆಗಿದ್ದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ, ಮಹ್ಲೋನನ ಪತ್ನಿಯಾದ ಮೋವಾಬ್ಯದ ರೂತಳನ್ನು ನನ್ನ ಹೆಂಡತಿಯನ್ನಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆ ಗತಿಸಿದ ಮಹ್ಲೋನನ ಹೆಸರಿನಲ್ಲೇ ಉಳಿಯುವುದು. ಮಾತ್ರವಲ್ಲ, ಅವನ ವಂಶವೃಕ್ಷವು ಅವನ ಬಂಧುಬಳಗದವರಲ್ಲೂ ಊರಿನಲ್ಲೂ ನೆಲೆಯಾಗಿರುವುದು. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ನಿಂತು ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಮೋವಾಬ್ಯಳೂ ಅವನ ಹೆಂಡತಿಯೂ ಆದ ರೂತಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು. ಅಧ್ಯಾಯವನ್ನು ನೋಡಿ |
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.