Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:12 - ಪರಿಶುದ್ದ ಬೈಬಲ್‌

12 ತಾಮಾರಳು ಯೆಹೂದನ ಮಗನಾದ ಪೆರೆಚನಿಗೆ ಜನ್ಮಕೊಟ್ಟಳು. ಅದರಿಂದ ಅವನ ಕುಟುಂಬವು ಅಭಿವೃದ್ಧಿ ಹೊಂದಿತು. ಹಾಗೆಯೇ ರೂತಳಿಂದ ಯೆಹೋವನು ನಿನಗೆ ಹಲವಾರು ಮಕ್ಕಳನ್ನು ಕೊಡಲಿ; ಅವನಂತೆಯೇ ನಿನ್ನ ಕುಟುಂಬವೂ ಅಭಿವೃದ್ಧಿ ಹೊಂದಲಿ” ಎಂದು ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬೆತ್ಲೆಹೇಮಿನಲ್ಲಿ ಘನವಂತನಾಗು! ಆ ಯುವತಿಯ ಮುಖಾಂತರ ಸರ್ವೇಶ್ವರ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆತನವು, ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆತನದಂತೆ ಪ್ರಖ್ಯಾತವಾಗಲಿ!” ಎಂದು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:12
8 ತಿಳಿವುಗಳ ಹೋಲಿಕೆ  

ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.


ಯೆಹೂದನ ಸೊಸೆಯಾಗಿದ್ದ ತಾಮಾರಳು ಯೆಹೂದನಿಂದ ಪೆರೆಚ್ ಮತ್ತು ಜೆರಹ ಎಂಬ ಇಬ್ಬರು ಗಂಡುಮಕ್ಕಳನ್ನು ಹೆತ್ತಳು. ಹೀಗೆ ಯೆಹೂದನಿಗೆ ಐದು ಗಂಡುಮಕ್ಕಳಾದವು.


ಏಲಿಯು ಎಲ್ಕಾನನನ್ನು ಮತ್ತು ಅವನ ಹೆಂಡತಿಯಾದ ಹನ್ನಳನ್ನು ಆಶೀರ್ವದಿಸಿ, “ಹನ್ನಳು ಯೆಹೋವನನ್ನು ಪ್ರಾರ್ಥಿಸಿ ಪಡೆದ ಮಗನನ್ನು ಆತನಿಗೆ ಒಪ್ಪಿಸಿದ್ದರಿಂದ ಯೆಹೋವನು ಅವಳಿಗೆ ಬೇರೆ ಮಕ್ಕಳನ್ನು ಅನುಗ್ರಹಿಸಲಿ” ಎಂದು ಹೇಳಿದನು. ಆಮೇಲೆ ಎಲ್ಕಾನ ಮತ್ತು ಹನ್ನ ಮನೆಗೆ ಹೋದರು.


ಯೆಹೂದನು ಪೆರೆಚನ ಮತ್ತು ಜೆರಹನ ತಂದೆ. (ಅವರ ತಾಯಿ ತಾಮರಳು.) ಪೆರೆಚನು ಹೆಚ್ರೋನನ ತಂದೆ. ಹೆಚ್ರೋನನು ಅರಾಮನ ತಂದೆ.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್ ಮತ್ತು ಜೆರಹ. (ಏರ್ ಮತ್ತು ಓನಾನ್ ಕಾನಾನಿನಲ್ಲಿ ಇರುವಾಗಲೇ ಸತ್ತುಹೋದರು.) ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್.


ಪೆರೆಚನ ವಂಶಾವಳಿ ಹೀಗಿದೆ: ಪೆರೆಚನು ಹೆಚ್ರೋನನ ತಂದೆ.


ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು