Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:17 - ಪರಿಶುದ್ದ ಬೈಬಲ್‌

17 ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಆ ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದೆ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಯನ ತಂದೆ, ಇಷಯನು ರಾಜನಾದ ದಾವೀದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೆರೆಹೊರೆಯ ಮಹಿಳೆಯರು, “ನವೊಮಿಗೆ ಕುಲಪುತ್ರನೊಬ್ಬನು ಹುಟ್ಟಿದ್ದಾನೆ!” ಎಂದು ಹೇಳಿ ಆ ಮಗುವಿಗೆ “ಓಬೇದ್” ಎಂದು ಹೆಸರಿಟ್ಟರು. ಇವನೇ ಜೆಸ್ಸೆಯ ತಂದೆ, ದಾವೀದನ ತಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೆರೆಹೊರೆಯ ಹೆಂಗಸರು ನೊವೊವಿುಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ ದಾವೀದನಿಗೆ ಅಜ್ಜನೂ ಆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನೆರೆಹೊರೆಯ ಸ್ತ್ರೀಯರು ನೊವೊಮಿಗೆ, “ಒಬ್ಬ ಮಗನು ಹುಟ್ಟಿದ್ದಾನೆ,” ಎಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆಯಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:17
6 ತಿಳಿವುಗಳ ಹೋಲಿಕೆ  

ನೊವೊಮಿಯು ಆ ಮಗುವನ್ನು ತನ್ನ ಉಡಿಲಲ್ಲಿಟ್ಟುಕೊಂಡು ಸಾಕಿಸಲುಹಿದಳು.


ಪೆರೆಚನ ವಂಶಾವಳಿ ಹೀಗಿದೆ: ಪೆರೆಚನು ಹೆಚ್ರೋನನ ತಂದೆ.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಓಬೇದನು ಇಷಯನ ತಂದೆ. ಇಷಯನು ದಾವೀದನ ತಂದೆ.


ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೆತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು