6 ಅದಕ್ಕೆ ಆ ಸಮೀಪಬಂಧುವು, “ನಾನು ಆ ಹೊಲವನ್ನು ಕೊಂಡುಕೊಳ್ಳಲಾರೆ. ಆ ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದುವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲವನ್ನೇ ಕಳೆದುಕೊಳ್ಳಬೇಕಾಗುವುದು. ಆದ್ದರಿಂದ ನೀನೇ ಆ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು.
6 ಅದಕ್ಕೆ ಆ ವ್ಯಕ್ತಿ, “ಹಾಗಾದರೆ ಹೊಲವನ್ನು ಕೊಂಡುಕೊಳ್ಳುವ ಹಕ್ಕನ್ನು ನಾನು ಬಿಟ್ಟುಕೊಡುತ್ತೇನೆ. ಇಲ್ಲದಿದ್ದರೆ ನನ್ನ ಕುಟುಂಬಕ್ಕೆ ಸೇರಿರುವ ಆಸ್ತಿಗೆ ನಷ್ಟವಾಗುತ್ತದೆ. ಆದ್ದರಿಂದ ಆ ಹಕ್ಕನ್ನು ನೀನೇ ವಹಿಸಿಕೋ, ನನ್ನಿಂದಾಗದು,” ಎಂದುಬಿಟ್ಟನು.
6 ಅದಕ್ಕೆ ಆ ಬಂಧುವು, “ನಾನು ನನ್ನ ಬಾಧ್ಯತೆಯನ್ನು ನಷ್ಟಪಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು. ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ಏಕೆಂದರೆ ನಾನು ಬಿಡಿಸಿಕೊಳ್ಳಲಾರೆನು,” ಎಂದನು.
ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.
ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’
ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.
ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ,
ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.
ನೊವೊಮಿಯು ತನ್ನ ಸೊಸೆಗೆ, “ಯೆಹೋವನು ಅವನಿಗೆ ಕೃಪೆತೋರಲಿ. ಯೆಹೋವನು ಸತ್ತುಹೋದವರಿಗೂ ಬದುಕಿರುವವರಿಗೂ ದಯೆತೋರಿಸುತ್ತಾನೆ” ಎಂದು ಹೇಳಿದಳು. ಆಮೇಲೆ ನೊವೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬನಲ್ಲದೆ ನಮ್ಮ ಸಮೀಪದ ಬಂಧುವೂ ನಮ್ಮ ಸಂರಕ್ಷಕನೂ ಆಗಿದ್ದಾನೆ” ಎಂದು ತಿಳಿಸಿದಳು.