Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:8 - ಪರಿಶುದ್ದ ಬೈಬಲ್‌

8 ಆದ್ದರಿಂದ ಆ ಸಮೀಪಬಂಧುವು, “ನೀನೇ ಹೊಲವನ್ನು ಕೊಂಡುಕೋ” ಎಂದು ಹೇಳಿ ತನ್ನ ಕೆರವನ್ನು ತೆಗೆದು ಬೋವಜನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂತೆಯೇ ಆ ನೆಂಟನು, “ಹೊಲವನ್ನು ನೀನೇ ಕೊಂಡುಕೊ,” ಎಂದು ಹೇಳಿ ತನ್ನ ಪಾದರಕ್ಷೆಯನ್ನು ಬೋವಜನಿಗೆ ತೆಗೆದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ - ನೀನೇ ತೆಗೆದುಕೋ ಎಂದು ಹೇಳಿ ತನ್ನ ಕೆರವನ್ನು ತೆಗೆದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಗೆಯೇ ಆ ಬಂಧುವು ಬೋವಜನಿಗೆ, “ನೀನೇ ನಿನಗೋಸ್ಕರ ಅದನ್ನು ಕೊಂಡುಕೋ,” ಎಂದು ತನ್ನ ಕೆರವನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:8
3 ತಿಳಿವುಗಳ ಹೋಲಿಕೆ  

ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.


(ಇಸ್ರೇಲರಲ್ಲಿ ಪೂರ್ವಕಾಲದ ಪದ್ಧತಿಯೇನೆಂದರೆ, ಯಾವುದಾದರೊಂದು ವಸ್ತುವನ್ನು ಕೊಂಡುಕೊಳ್ಳುವಾಗಲೂ ತೆಗೆದುಕೊಳ್ಳುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಒಬ್ಬನು ತನ್ನ ಕೆರವನ್ನು ಮತ್ತೊಬ್ಬನಿಗೆ ಕೊಡುತ್ತಿದ್ದನು.)


ಆಗ ಬೋವಜನು ಹಿರಿಯರಿಗೂ ಎಲ್ಲಾ ಜನರಿಗೂ, “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಇವರೆಲ್ಲರ ಆಸ್ತಿಯನ್ನು ನೊವೊಮಿಯಿಂದ ಕೊಂಡುಕೊಳ್ಳುತ್ತಿದ್ದೇನೆ. ಇದಕ್ಕೆ ನೀವು ಸಾಕ್ಷಿಯಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು