ರೋಮಾಪುರದವರಿಗೆ 1:16 - ಪರಿಶುದ್ದ ಬೈಬಲ್16 ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಾಕಾ ಪುರಾ ಆತ್ಮಿಕ್ ಬರೊಸೊ ಹಾಯ್; ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಅದ್ದಿ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಸಗ್ಳ್ಯಾಕ್ನಿಬಿ ಹುರ್ವುತಲೊ ದೆವಾಚೊ ಬಳ್ ತೊ. ಅಧ್ಯಾಯವನ್ನು ನೋಡಿ |
ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.