ರೋಮಾಪುರದವರಿಗೆ 1:20 - ಪರಿಶುದ್ದ ಬೈಬಲ್20 ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೇಗಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯಶಕ್ತಿಯೂ ದೇವತ್ವವೂ ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತವೆ; ಹೀಗಿರುವದರಿಂದ ಅವರು ಉತ್ತರವಿಲ್ಲದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಡೊಳ್ಯಾಕ್ನಿ ದಿಸಿ ನಸಲ್ಲಿ ತೆಚಿ ಗುನಾ ಮಟ್ಲ್ಯಾರ್, ತೆಚೊ ಕನ್ನಾಚ್ ಸರಿನಸಲ್ಲೊ ಬಳ್ ಅನಿ ದೈವಿಕ್ ಗುನ್, ಹ್ಯೊ ಜಗ್ ರಚಲ್ಲ್ಯಾಕ್ನಾ ಧರುನ್ ತೆನಿ ರಚಲ್ಲ್ಯಾ ಸಗ್ಳ್ಯಾಚ್ಯಾ ವೈನಾ ದಿಸುನ್ ಯೆತ್ಯಾತ್, ತಸೆಮನುನ್ ತ್ಯಾ ಲೊಕಾನಿಕ್ಡೆ ನೆವಾನ್ ಸಾಂಗುಕ್ ಕಾಯ್ಬಿ ನಾ! ಅಧ್ಯಾಯವನ್ನು ನೋಡಿ |