21 ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.
21 ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
21 ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.
21 ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.
21 ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.
ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;
ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.
ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”
ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.
ದೇವರು ತನ್ನ ಕೋಪವನ್ನು ತೋರಿಸುತ್ತಾನೆ, ಏಕೆಂದರೆ ದೇವರ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ಅವರಿಗೆ ಸ್ಪಷ್ಟಪಡಿಸಲಾಗಿದೆ. ಹೌದು, ತನ್ನ ಬಗ್ಗೆ ತಿಳಿದುಕೊಳ್ಳಬಹುದಾದ ಪ್ರತಿಯೊಂದನ್ನೂ ದೇವರು ಜನರಿಗೆ ಸ್ಪಷ್ಟವಾಗಿ ತೋರಿಸಿದ್ದಾನೆ.
ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.”
ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”
“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.
ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.
ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.
ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.
ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.
ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”
ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.’ ಇದೇ ನನ್ನ ಉದ್ದೇಶ