ರೋಮಾಪುರದವರಿಗೆ 1:32 - ಪರಿಶುದ್ದ ಬೈಬಲ್32 ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಹ್ಯಾ ವಾಟೆನ್ ಚಲ್ತಲ್ಯಾಕ್ನಿ ಮರ್‍ನಾಚಿ ಶಿಕ್ಷಾ ಹೊತಾ, ಮನುನ್ ದೆವಾಚೊ ಖಾಯ್ದೊ ಸಾಂಗ್ತಾ. ಮನುನ್ ತೆಂಕಾ ಗೊತ್ತ್ ಹಾಯ್ ಜಾಲ್ಯಾರ್‍ಬಿ, ತೆನಿ ಹೆ ಸಗ್ಳೆ ಕರ್‍ತ್ಯಾತ್ ಎವ್ಡೆಚ್ ನ್ಹಯ್, ಹೆ ಸಗ್ಳೆ ಕರ್‍ತಲ್ಯಾ ದುಸ್ರ್ಯಾಕ್ನಿ ತೆನಿ ಅನಿ ಉಲ್ಲಿ ಉಮ್ಮೆದ್ ಭರ್ತ್ಯಾತ್. ಅಧ್ಯಾಯವನ್ನು ನೋಡಿ |
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.