ರೋಮಾಪುರದವರಿಗೆ 10:10 - ಪರಿಶುದ್ದ ಬೈಬಲ್10 ಹೌದು, ನಾವು ನಮ್ಮ ಹೃದಯಗಳಲ್ಲಿ ನಂಬುವುದರ ಮೂಲಕ ನೀತಿವಂತರಾಗುತ್ತೇವೆ. “ನಂಬುತ್ತೇವೆ” ಎಂದು ಬಾಯಾರೆ ಹೇಳುವುದರ ಮೂಲಕ ರಕ್ಷಣೆ ಹೊಂದುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೃದಯದಿಂದ ನಂಬುವದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾ ವಿಶ್ವಾಸಾಚ್ಯಾ ವೈನಾಚ್ ಅಮಿ ದೆವಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲೆ ಮನುನ್ ಥವಲ್ಲೆ ಹಾಯ್, ಅಮಿ ಖರೆ ಹೊತ್ತೆ ವಳ್ಕುನ್ ಘೆಟಲ್ಲ್ಯಾನುಚ್ ಅಮ್ಕಾ ಬಚಾವ್ ಕರ್‍ಲ್ಯಾನಾಯ್. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.