ರೋಮಾಪುರದವರಿಗೆ 10:18 - ಪರಿಶುದ್ದ ಬೈಬಲ್18 ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಖರೆ ಮಿಯಾ ಇಚಾರ್ತಾ: ತೆನಿ ಬಾತ್ಮಿ ಆಯ್ಕಿನಸಲ್ಲೆ ಖರೆ ಹಾಯ್? ಹೊಯ್ ತೆನಿ ಖರೆ ಹೊತ್ತೆ ಕರ್‍ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ, ತೆಂಚ್ಯಾ ಧನಾಚೊ ಅವಾಜ್ ಸಗ್ಳ್ಯಾ ಜಗಾವರ್ತಿ ಜಾವ್ನ್ ಪಾವ್ಲೊ: ತೆಂಚ್ಯಾ ಗೊಸ್ಟಿಯಾ ಜಿಮ್ನಿಚ್ಯಾ ಆಕ್ರಿ ಪತರ್ ಜಾವ್ನ್ ಪಾವ್ಲ್ಯಾತ್: ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.