ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.
ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.
ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.
ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.
ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’”