Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:2 - ಪರಿಶುದ್ದ ಬೈಬಲ್‌

2 ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರು ತಾನು ಮುಂದಾಗಿ ತನ್ನ ಜನರಾಗುವದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಯನ್ನು ತಳ್ಳಿ ಬಿಡಲಿಲ್ಲ. ಎಲೀಯನ ಚರಿತ್ರೆಯಲ್ಲಿ ಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅದ್ದಿಕ್ನಾಚ್ ಎಚುನ್ ಘೆಟಲ್ಲ್ಯಾ ಅಪ್ಲ್ಯಾ ಲೊಕಾಕ್ನಿ ದೆವಾನ್ ತಿರಸ್ಕಾರ್ ಕರುಕ್‍ನಾ. ಎಲಿಯಾ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ವಿರೊದ್ ದೆವಾಕ್ಡೆ ಲೈ ಮಾಗುಕ್ ಲಾಗಲ್ಲೊ, ತ್ಯಾ ಎಳಾರ್ ತೊ ಪವಿತ್ರ್ ಪುಸ್ತಕಾಚೊ ಭಾಗ್ ಕಾಯ್ ಸಾಂಗ್ತಾ ತುಮ್ಕಾ ಗೊತ್ತ್ ಹಾಯ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:2
24 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.


“ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.


ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.


ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.


ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.


ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ ಎಂದರು.


ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.


ಯೇಸುವು ಜೋರ್ಡನ್ ನದಿಯಿಂದ ಹಿಂತಿರುಗಿದನು. ಆತನು ಪವಿತ್ರಾತ್ಮಭರಿತನಾಗಿದ್ದನು. ಪವಿತ್ರಾತ್ಮನು ಯೇಸುವನ್ನು ಅಡವಿಗೆ ನಡಿಸಿದನು.


“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.


ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ.


‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’


ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ.


ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ.


ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.


ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.


ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು