Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:27 - ಪರಿಶುದ್ದ ಬೈಬಲ್‌

27 ನಾನು ಆ ಜನರ ಪಾಪಗಳನ್ನು ಪರಿಹರಿಸುವಾಗ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ಪರಿಹರಿಸುವೆನು ಅವರ ಪಾಪಗಳನ್ನು ಅವರೊಡನೆ ಮಾಡಿಕೊಳ್ಳುವೆನಾಗ ಒಡಂಬಡಿಕೆಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವದು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಅವರ ಪಾಪಗಳನ್ನು ತೆಗೆದುಹಾಕುವಾಗ, ಅವರೊಂದಿಗೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ ಎಂದು ತಿಳಿದುಕೊಳ್ಳುವೆನು,” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೆಂಚಿ ಪಾಪಾ ಮಿಯಾ ಕಾಡುನ್ ಘೆವ್ನ್ ನ್ಹೆಲ್ಲ್ಯಾ ತನ್ನಾ ತೆಂಚ್ಯಾ ವಾಂಗ್ಡಾ ಎಕ್ ಕರಾರ್ ಕರ್‍ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:27
12 ತಿಳಿವುಗಳ ಹೋಲಿಕೆ  

ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.”


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು