ರೋಮಾಪುರದವರಿಗೆ 11:28 - ಪರಿಶುದ್ದ ಬೈಬಲ್28 ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಅಬ್ರಹಾಮ ಇಸಾಕ ಯಾಕೋಬರೆಂಬ ಪಿತೃಗಳ ವಂಶಸ್ಥರಾಗಿರುವದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಕಶ್ಯಾಕ್ ಮಟ್ಲ್ಯಾರ್, ತೆನಿ ಬರ್‍ಯಾ ಖಬ್ರೆಕ್ ತಿರಸ್ಕಾರ್ ಕರ್‍ಲ್ಯಾನಿ, ತುಮ್ಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಲಾಗುನ್ ಜುದೆವ್ ಲೊಕಾ ದೆವಾಚಿ ದುಸ್ಮನಾ ಹೊಲ್ಯಾತ್, ಖರೆ ದೆವಾನ್ ಎಚುನ್ ಕಾಡಲ್ಲ್ಯಾ ತೆಂಚ್ಯಾ ಘರಾನ್ಯಾಚ್ಯಾ ಅದ್ಲ್ಯಾ ಲೊಕಾಂಚ್ಯಾ ವಿಶಯಾತ್ನಾ ಬಗಟ್ಲ್ಯಾರ್ ತೆನಿ ದೆವಾಚಿ ದೊಸ್ತಾಚ್ ಮನುಕ್ ಹೊತಾ. ಅಧ್ಯಾಯವನ್ನು ನೋಡಿ |