Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:29 - ಪರಿಶುದ್ದ ಬೈಬಲ್‌

29 ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ಅಪ್ನಿ ಎಚುನ್ ಕಾಡಲ್ಲ್ಯಾಚ್ಯಾ ವಿಶಯಾತ್ ಅನಿ ಆಶಿರ್ವಾದ್ ದಿತಲ್ಯಾ ವಿಶಯಾತ್ ದೆವ್ ಅಪ್ನಾಚೊ ಮನ್ ಬದ್ಲಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:29
16 ತಿಳಿವುಗಳ ಹೋಲಿಕೆ  

ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.”


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


“ನಾನು ದೇವರಾದ ಯೆಹೋವನು. ನಾನು ಬದಲಾಗದ ದೇವರು. ನೀವು ಯಾಕೋಬನ ಮಕ್ಕಳು. ನೀವು ಸಂಪೂರ್ಣವಾಗಿ ನಾಶ ಹೊಂದಲಿಲ್ಲ.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.


ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು.


ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.


ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.


ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.


ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು