3 ಎಲೀಯನು, “ಪ್ರಭುವೇ, ಜನರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು; ನಿನ್ನ ಯಜ್ಞವೇದಿಕೆಗಳನ್ನು ನಾಶಮಾಡಿದರು. ಪ್ರವಾದಿಗಳಲ್ಲಿ ನಾನೊಬ್ಬನು ಮಾತ್ರ ಇನ್ನೂ ಬದುಕಿದ್ದೇನೆ. ಈಗ ಜನರು ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ” ಎಂದು ಪ್ರಾರ್ಥಿಸಿದನು.
3 ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
3 ಆತನು ಇಸ್ರಯೇಲರ ವಿರುದ್ಧ, “ಸರ್ವೇಶ್ವರಾ, ಈ ಜನರು ನಿಮ್ಮ ಪ್ರವಾದಿಗಳನ್ನು ಸಂಹರಿಸಿದ್ದಾರೆ. ನಿಮ್ಮ ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಉಳಿದಿರುವವನು ನಾನೊಬ್ಬನೇ. ನನ್ನನ್ನೂ ಕೊಲ್ಲಲು ಯತ್ನಿಸುತ್ತಿದ್ದಾರೆ,” ಎಂದು ದೇವರಿಗೆ ದೂರಿತ್ತನು.
3 ಅವನು ದೇವರ ಮುಂದೆ - ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದುಹಾಕಿದ್ದಾರೆ, ನಾನೊಬ್ಬನೇ ಉಳಿದಿದ್ದೇನೆ, ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ
3 “ಕರ್ತಾ, ಅವರು ನಿಮ್ಮ ಪ್ರವಾದಿಗಳನ್ನು ಕೊಂದಿದ್ದಾರೆ. ನಿಮ್ಮ ಬಲಿಪೀಠವನ್ನು ಒಡೆದುಹಾಕಿದ್ದಾರೆ, ನಾನು ಒಬ್ಬನೇ ಉಳಿದಿದ್ದೇನೆ. ಅವರು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ,” ಎಂದು ಇಸ್ರಾಯೇಲರಿಗೆ ವಿರೋಧವಾಗಿ ದೇವರಲ್ಲಿ ವಿಜ್ಞಾಪನೆ ಮಾಡಿಕೊಂಡನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”
ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.
ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.