Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:32 - ಪರಿಶುದ್ದ ಬೈಬಲ್‌

32 ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಕಶ್ಯಾಕ್ ಮಟ್ಲ್ಯಾರ್, ಸಗ್ಳ್ಯಾ ಲೊಕಾಕ್ನಿ ದೆವಾನ್ ಅಪ್ನಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾ ಹ್ಯಾ ಪರಿಸ್ಥಿಚ್ಯಾ ಭುತ್ತುರ್ ಭಾಂದುನ್ ಘಾಟ್ಲ್ಯಾನಾಯ್, ಅಶೆ ಸಗ್ಳ್ಯಾ ಲೊಕಾಕ್ನಿ ಅಪ್ನಿ ದಯಾ ದಾಕ್ವುಚೆ ಮನುನ್ ತೆನಿ ಅಶೆ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:32
9 ತಿಳಿವುಗಳ ಹೋಲಿಕೆ  

ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.


ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.


ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.


ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು.


ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು