Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:33 - ಪರಿಶುದ್ದ ಬೈಬಲ್‌

33 ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ದೆವಾಚಿ ಸಂಪತ್ತ್ ಕವ್ಡಿ ಮೊಟಿ!‍ ತೆಚಿ ಬುದ್ದ್ ಅನಿ ಶಾನ್‍ಪಾನ್ ಕವ್ಡೆ ಮೊಟೆ! ತೆನಿ ಘೆಟಲ್ಲ್ಯಾ ನಿರ್ದಾರಾಂಚ್ಯಾ ವಿಶಯಾತ್ನಿ ಸೊಡ್ಸುನ್ ಸಾಂಗ್ತಲೊ ಕೊನ್ ಹಾಯ್? ತೆಚ್ಯಾ ವಾಟಾಂಚ್ಯಾ ವಿಶಯಾತ್ ಕಳ್ವುನ್ ಘೆತಲೊ ಕೊನ್ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:33
38 ತಿಳಿವುಗಳ ಹೋಲಿಕೆ  

ದೇವರ ಅದ್ಭುತಕಾರ್ಯಗಳು ಗ್ರಹಿಸಲಶಕ್ಯ. ಆತನ ಮಹತ್ಕಾರ್ಯಗಳು ಅಸಂಖ್ಯಾತ.


ಯೆಹೋವನೇ, ನೀನು ಅಂತಹ ಮಹಾಕಾರ್ಯಗಳನ್ನು ಮಾಡಿರುವೆ. ನಿನ್ನ ಆಲೋಚನೆಗಳನ್ನು ಗ್ರಹಿಸಿಕೊಳ್ಳಲು ನಮ್ಮಿಂದಾಗದು.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


“ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ; ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ.


ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.


ಈ ಲೋಕವನ್ನು ಕುರಿತು ಆಲೋಚಿಸುವುದಕ್ಕೆ ದೇವರು ನನಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು.


ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.


ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.


ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”


ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಈ ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.


ಗ್ರಹಿಸಲಶಕ್ಯವಾದ ಅದ್ಭುತಕಾರ್ಯಗಳನ್ನೂ ಅಸಂಖ್ಯಾತವಾದ ಮಹತ್ಕಾರ್ಯಗಳನ್ನೂ ಆತನು ಮಾಡುವನು.


ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು.


ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ.


“ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು.


ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?


ದೇವರ ರಹಸ್ಯ ಯೋಜನೆಗಳನ್ನು ಆಲಿಸಿರುವೆಯಾ? ನೀನೊಬ್ಬನೇ ಜ್ಞಾನಿಯೆಂದು ಭಾವಿಸಿಕೊಂಡಿರುವಿಯಾ?


ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.


ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.


ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.


ಪ್ರತಿಯೊಂದು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದನ್ನು ಅರ್ಥಮಾಡಿಕೊಳ್ಳುವುದಕ್ಕೂ ಕಷ್ಟ.


ಇದಲ್ಲದೆ ದೇವರ ಅನೇಕ ಕಾರ್ಯಗಳನ್ನು ಸಹ ನಾನು ನೋಡಿದ್ದೇನೆ. ಭೂಮಿಯ ಮೇಲೆ ದೇವರು ಮಾಡುವ ಕಾರ್ಯಗಳನ್ನೆಲ್ಲಾ ಜನರು ಅರ್ಥಮಾಡಿಕೊಳ್ಳಲಾರರು. ಒಬ್ಬನು ಅರ್ಥಮಾಡಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅವನು ಅರ್ಥಮಾಡಿಕೊಳ್ಳಲಾರನು. ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬಲ್ಲೆನೆಂದು ಜ್ಞಾನಿಯು ಹೇಳಿಕೊಂಡರೂ ಅದು ಸತ್ಯವಲ್ಲ. ಅವುಗಳನ್ನೆಲ್ಲ ಯಾರೂ ಅರ್ಥಮಾಡಿಕೊಳ್ಳಲಾರರು.


ಈ ಪಾಠವು ಸರ್ವಶಕ್ತನಾದ ಯೆಹೋವನಿಂದ ಬರುತ್ತದೆ. ಆತನು ಆಶ್ಚರ್ಯಕರವಾದ ಸಲಹೆಯನ್ನು ಕೊಡುತ್ತಾನೆ. ಆತನು ನಿಜವಾಗಿಯೂ ಜ್ಞಾನಿ.


ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.


ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು. ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ.


ಮೊರ್ದೆಕೈಗೆ ಈ ವಿಷಯ ಗೊತ್ತಾದಾಗ ಅವನು ಅದನ್ನು ಎಸ್ತೇರಳಿಗೆ ತಿಳಿಸಿದನು. ಎಸ್ತೇರ್ ರಾಣಿಯು ಇದನ್ನು ಕೊಡಲೇ ಅರಸನಿಗೆ ತಿಳಿಸಿದಳು. ಅಷ್ಟೇ ಅಲ್ಲ, ಮೊರ್ದೆಕೈ ಎಂಬವನು ಈ ಒಳಸಂಚನ್ನು ಕಂಡುಹಿಡಿದು ತನಗೆ ತಿಳಿಸಿದನು ಎಂಬದಾಗಿಯೂ ಅರಸನಿಗೆ ವರದಿ ಮಾಡಿದಳು.


ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ:


ದೇವರು ತನ್ನ ಆಲೋಚನೆಗೆ ತಕ್ಕಂತೆ ನನಗೆ ಮಾಡುವನು. ಆತನಲ್ಲಿ ಇಂಥಾ ಸಂಕಲ್ಪಗಳು ಎಷ್ಟೋ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು