Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:8 - ಪರಿಶುದ್ದ ಬೈಬಲ್‌

8 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪವಿತ್ರ್ ಪುಸ್ತಕ್ ಮನ್ತಾ, “ದೆವಾನ್ ತೆಂಚಿ ಮನಾ ಅನಿ ಕಾಳ್ಜಾ ಮಂದ್ ಕರ್‍ಲ್ಯಾನ್; ಆಜ್‍ ಬಿ ತೆಂಕಾ ದಿಸಿನಾ ನಾಹೊಲ್ಯಾರ್ ಆಯ್ಕಿನಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:8
13 ತಿಳಿವುಗಳ ಹೋಲಿಕೆ  

ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.


ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


‘ಈ ಜನರ ಬಳಿಗೆ ಹೋಗಿ ಇಂತೆನ್ನಿರಿ: ನೀನು ಕಿವಿಗೊಟ್ಟು ಕೇಳಿದರೂ ಅರ್ಥಮಾಡಿಕೊಳ್ಳವುದಿಲ್ಲ; ಕಣ್ಣಾರೆ ಕಂಡರೂ ಗ್ರಹಿಸಿಕೊಳ್ಳುವುದಿಲ್ಲ.


ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’


ಅನ್ಯಜನಾಂಗಗಳು ಯೆಹೋವನಲ್ಲಿ ಭಕ್ತಿಯಿಂದಿದ್ದರೂ ತಮ್ಮ ಸ್ವಂತ ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ಪೂರ್ವಿಕರು ಮಾಡಿದಂತಹ ಕಾರ್ಯಗಳನ್ನು ಮಾಡುತ್ತಿದ್ದರು. ಅವರು ಇಂದಿಗೂ ಇಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ.


ಇಂದಿಗೂ ಸಹ ಅವರು ಪೂರ್ವಕಾಲದಲ್ಲಿ ಮಾಡುತ್ತಿದ್ದಂತೆಯೇ ಜೀವಿಸುತ್ತಿದ್ದಾರೆ. ಅವರಿಗೆ ಯೆಹೋವನಲ್ಲಿ ಭಕ್ತಿಯಿಲ್ಲ. ಅವರು ಇಸ್ರೇಲರ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗುವುದಿಲ್ಲ. ಯೆಹೋವನು ಯಾಕೋಬನ ಸಂತತಿಗೆ ನೀಡಿದ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸುವುದಿಲ್ಲ.


ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು