ರೋಮಾಪುರದವರಿಗೆ 12:19 - ಪರಿಶುದ್ದ ಬೈಬಲ್19 ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಾಜ್ಯಾ ಪ್ರಿತಿಚ್ಯಾನು, ಕನ್ನಾಬಿ ಶೆಡ್ ಕಾಡುನ್ ಘೆವ್‍ನಕಾಶಿ; ತೆ ದೆವಾಚ್ಯಾ ರಾಗಾಚ್ಯಾ ತಾಬೆತ್ ಸೊಡಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ: “ಮಿಯಾ ಶೆಡ್ ಕಾಡುನ್ ಘೆತಾ, ಮಿಯಾ ತೆ ಫಾಟಿ ಪರ್ತುನ್ ದಿತಾ ಮನುನ್ ಸರ್ವೆಸ್ವರ್ ಮನ್ತಾ.” ಅಧ್ಯಾಯವನ್ನು ನೋಡಿ |