Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:20 - ಪರಿಶುದ್ದ ಬೈಬಲ್‌

20 ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಬದಲು, ನಿನ್ನ ಶತ್ರು ಹಸಿದಿದ್ದರೆ ಉಣಲು ಬಡಿಸು; ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಉರಿಯುವ ಕೆಂಡಗಳನ್ನು ಸುರಿಸಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಾಗಾದರೆ ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆದರೆ, ನಿನ್ನ ವೈರಿಯು ಹಸಿದಿದ್ದರೆ, ಅವನಿಗೆ ಆಹಾರ ಕೊಡು, ಅವನು ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ನೀನು ಅವನ ತಲೆಯ ಮೇಲೆ ಉರಿಯುವ ಕೆಂಡವನ್ನು ಸುರಿದಂತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ಬಿ ಪವಿತ್ರ್ ಪುಸಕ್ ಮನ್ತಾ, “ತುಮ್ಚಿ ದುಶ್ಮನಾ ಭುಕೆನ್ ರ್‍ಹಾಲ್ಯಾರ್ ತೆಂಕಾ ವಾಡಾ; ತೆನಿ ಸೊಸೆನ್ ರ್‍ಹಾಲ್ಯಾರ್ ತೆಂಕಾ ಫಿವ್ಕ್ ದಿವಾ; ಅಶೆ ಕರಲ್ಲ್ಯಾ ವೈನಾ ತಿಯಾ ತೆಕಾ ಮರ್ಯಾದಿನ್ ಭರಿ ಸಾರ್ಕೆ ಸರ್ಕೆ ಹೊತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:20
12 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.


“ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನೆಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ.


ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲುಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು, ಅರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು.


ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ಈ ದಿನ ತೋರಿಸಿರುವೆ. ಆದ್ದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.


ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.


ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.


ಆಮೇಲೆ ಯೋಸೇಫನು ತನ್ನ ಸೇವಕರಿಗೆ, “ಅವರ ಚೀಲಗಳಿಗೆ ದವಸಧಾನ್ಯಗಳನ್ನು ತುಂಬಿರಿ” ಎಂದು ಹೇಳಿದನು. ಈ ದವಸಧಾನ್ಯಗಳಿಗೆ ಸಹೋದರರು ಹಣವನ್ನು ಪಾವತಿ ಮಾಡಿದರೂ ಯೋಸೇಫನು ಆ ಹಣವನ್ನು ಇಟ್ಟುಕೊಳ್ಳಲಿಲ್ಲ. ಅವನು ಆ ಹಣವನ್ನು ಅವರವರ ದವಸಧಾನ್ಯಗಳ ಚೀಲಗಳಲ್ಲಿ ಇಡಿಸಿದನು. ಅಲ್ಲದೆ ಪ್ರಯಾಣಕ್ಕೆ ಬೇಕಾದ ವಸ್ತುಗಳನ್ನೂ ಅವರಿಗೆ ಕೊಟ್ಟನು.


ಕೆಟ್ಟತನವು ನಿಮ್ಮನ್ನು ಸೋಲಿಸುವುದಕ್ಕೆ ಅವಕಾಶಕೊಡದೆ ಒಳ್ಳೆಯದನ್ನು ಮಾಡುವುದರ ಮೂಲಕವಾಗಿ ಕೆಟ್ಟತನವನ್ನು ಸೋಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು