ರೋಮಾಪುರದವರಿಗೆ 12:9 - ಪರಿಶುದ್ದ ಬೈಬಲ್9 ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತುಮ್ಚ್ಯಾ ಪ್ರೆಮಾತ್ ಕಸ್ಲೊಬಿ ಕಪಟ್ ರಾವ್ಚೆ ನ್ಹಯ್. ವಾಯ್ಟ್ ಹೊತ್ತೆ ಸೊಡುನ್ ಸೊಡಾ ಅನಿ ಬರೆ ಹೊತ್ತೆ ಧರುನ್ ಘೆವ್ನ್ ಜಾವಾ. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.