Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:14 - ಪರಿಶುದ್ದ ಬೈಬಲ್‌

14 ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಧನಿಯಾ ಜೆಜು ಕ್ರಿಸ್ತಾಕುಚ್ ತುಮ್ಚೆ ಮಾರಾಮಾರಿಕ್ ಜಾತಾನಾ ನೆಸ್ತಲೆ ಕವಚ್ ಕರುನ್ ಘೆವ್ನ್ ನೆಸಾ ಅನಿ ತುಮ್ಚ್ಯಾ ಪಾಪಾಚ್ಯಾ ಸ್ವಬಾವಾಕ್ ಅನಿ ಆಂಗಾಚಿ ಆಶಾ ಪುರಾ ಕರ್‍ತಲ್ಯಾ ಕಾಮಾಕ್ನಿ ಸೊಡುನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:14
11 ತಿಳಿವುಗಳ ಹೋಲಿಕೆ  

ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.


ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.


ಈ ನಿಯಮಗಳು ನೋಡುವುದಕ್ಕೆ ಬದ್ಧಿಯುಳ್ಳವಾಗಿವೆ. ಆದರೆ ಅತಿವಿನಯವಂತರಂತೆ ನಟಿಸಲು ಮತ್ತು ತಮ್ಮ ದೇಹಗಳನ್ನು ದಂಡಿಸಲು ಜನರನ್ನು ಪ್ರೆರೇಪಿಸುವ ಅವುಗಳು ಕೇವಲ ಮಾನವ ನಿರ್ಮಿತವಾದ ಧರ್ಮದ ಒಂದು ಭಾಗವಾಗಿವೆ. ಆದರೆ ಪಾಪಸ್ವಭಾವವು ಇಚ್ಛಿಸುವ ದುಷ್ಕೃತ್ಯಗಳನ್ನು ಮಾಡದಂತೆ ಅವು ಜನರಿಗೆ ಯಾವ ಸಹಾಯವನ್ನೂ ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು