ರೋಮಾಪುರದವರಿಗೆ 13:4 - ಪರಿಶುದ್ದ ಬೈಬಲ್4 ಅಧಿಕಾರಿಯು ನಿಮ್ಮ ಒಳ್ಳೆಯದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ. ಆದರೆ ನೀವು ಕೆಟ್ಟದ್ದನ್ನು ಮಾಡಿದರೆ ಭಯಪಡಲೇಬೇಕು. ನಿಮ್ಮನ್ನು ದಂಡಿಸಲು ಅವನಿಗೆ ಅಧಿಕಾರವಿದೆ. ಅವನು ಆ ಅಧಿಕಾರವನ್ನು ಉಪಯೋಗಿಸುವನು. ಅಧಿಕಾರಿಯು ಕೆಟ್ಟದ್ದನ್ನು ಮಾಡುವ ಜನರನ್ನು ದಂಡಿಸುವುದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಕಶ್ಯಾಕ್ ಮಟ್ಲ್ಯಾರ್ ಸಗ್ಳೆ ಅದಿಕಾರಿ ತುಮ್ಚ್ಯಾ ಬರೆಪಾನಾ ಸಾಟ್ನಿಚ್ ಕಾಮಾ ಕರುಲ್ಯಾತ್. ತೆನಿ ದೆವಾಚೆ ಸೆವಕ್ ಹೊವ್ನ್ ಹಾತ್. ಖರೆ ತುಮಿ ವಾಯ್ಟ್ ಕರ್ಲ್ಯಾಶಿ ತರ್ ತನ್ನಾ ತೆಕಾ ಭಿಂವ್ಚೆ ಪಡ್ತಾ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಶಿಕ್ಷಾ ಲಾವ್ತಲೊ ಅದಿಕಾರ್ ಖರೆಚ್ ದಿಲ್ಲೊ ಹಾಯ್, ತೆನಿ ದೆವಾಚಿ ಸೆವಕಾ ತಸೆಮನುನ್ ವಾಯ್ಟ್ ಕರ್‍ತಲ್ಯಾಕ್ನಿ ದೆವಾಚಿ ಶಿಕ್ಷಾ ತೆನಿ ದಿವ್ನುಚ್ ದಿತ್ಯಾತ್. ಅಧ್ಯಾಯವನ್ನು ನೋಡಿ |
ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಿಕವಾಗಿ ನರಹತ್ಯೆ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಿಕವಾಗಿ ಕೊಂದರೆ ಆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.