Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:5 - ಪರಿಶುದ್ದ ಬೈಬಲ್‌

5 ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದ್ದರಿಂದ ನಿಮ್ಮ ಅಧಿಕಾರಿಗಳಿಗೆ ಅಧೀನರಾಗಿರಿ. ಕೇವಲ ದಂಡನೆಯನ್ನು ತಪ್ಪಿಸಿಕೊಳ್ಳುವ ಸಲುವಾಗಿ ಅಲ್ಲ, ನಿಮ್ಮ ಮನಸ್ಸಾಕ್ಷಿಯ ಸಲುವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿಗೆ ನ್ಯಾಯವಾಗಿ ತೋರುವದರಿಂದಲೂ ಅವನಿಗೆ ಅಧೀನನಾಗುವದು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಕಾರನಾಸಾಟಿ, ತುಮಿ ಅದಿಕಾರ್ಯ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲೆ ಖಾಲಿ ದೆವಾಚಿ ಶಿಕ್ಷಾ ಗಾವ್ತಾ ಮನುನ್ ಎವ್ಡೆಚ್ ನ್ಹಯ್, ತುಜ್ಯಾ ಭುತ್ತುರ್‍ಲ್ಯಾ ಮನಾಸಾಟ್ನಿ ತಿಯಾ ತೆಕಾ ಖಾಲ್ತಿ ಹೊವ್ನ್ ಚಲುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:5
10 ತಿಳಿವುಗಳ ಹೋಲಿಕೆ  

ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.


ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.


ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶಮಾನವಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.


ಈ ಕಾರಣದಿಂದಲೇ ನೀವು ತೆರಿಗೆಯನ್ನು ಸಹ ಕೊಡುತ್ತೀರಿ. ಆ ಅಧಿಕಾರಿಗಳು ದೇವರಿಗೋಸ್ಕರ ಕೆಲಸ ಮಾಡುವವರಾಗಿದ್ದಾರೆ; ತಮ್ಮ ಸಮಯವನ್ನೆಲ್ಲಾ ಆಡಳಿತ ಮಾಡಲು ಉಪಯೋಗಿಸುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು