Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:8 - ಪರಿಶುದ್ದ ಬೈಬಲ್‌

8 ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ಧರ್ಮಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎಕಾಮೆಕಾಚೊ ಪ್ರೆಮ್ ಕರುಚೊ -ಮನ್ತಲ್ಯಾ ಹ್ಯಾ ಎಕುಚ್ ಎಕ್ ರಿನಾತ್ ಸೊಡುನ್ ಕೊನಾಚ್ಯಾಬಿ ಕಸ್ಲ್ಯಾಬಿ ರಿನಾತ್ ರ್‍ಹಾವ್‍ನಕಾಶಿ. ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಎಕಾಮೆಕಾಚೊ ಪ್ರೆಮ್ ಕರ್‍ತಾ ತೊ ಸಗ್ಳೆ ಖಾಯ್ದೆ ಫಾಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:8
12 ತಿಳಿವುಗಳ ಹೋಲಿಕೆ  

ಪ್ರೀತಿಯು ಬೇರೆಯವರಿಗೆ ಕೇಡುಮಾಡುವುದಿಲ್ಲ. ಆದ್ದರಿಂದ ಪ್ರೀತಿಸುವುದಕ್ಕೂ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗುವುದಕ್ಕೂ ವ್ಯತ್ಯಾಸವೇನೂ ಇಲ್ಲ.


“ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ.


“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.


ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.


ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯು ನಿಮ್ಮನ್ನೆಲ್ಲರನ್ನೂ ಸಂಪೂರ್ಣವಾದ ಒಗ್ಗಟ್ಟಿನಲ್ಲಿರಿಸುವುದು.


“ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು