Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:9 - ಪರಿಶುದ್ದ ಬೈಬಲ್‌

9 ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ವೆಭಿಚಾರ್ ಕರುನಕೊ, ಜಿವಾನಿ ಮಾರುನಕೊ, ಚೊರುನಕೊ, ದುಸ್ರ್ಯಾಂಚ್ಯಾ ಸಾಮಾನಾಂಚಿ ಆಶಾ ಕರುನಕೊ”, ಹೆ ಅನಿ ದುಸ್ರೆ ಕಸ್ಲೆಬಿ ಜೆ ಖಾಯ್ದೆ ಹಾತ್ ತೆ “ತುಜೊ ತಿಯಾ ಪ್ರೆಮ್ ಕರ್‍ತೆ ತಸೊ ತುಜ್ಯಾ ಸೆಜಾರ್‍ಯಾಚೊಬಿ ಪ್ರೆಮ್ ಕರ್” ಮನ್ತಲ್ಯಾ ಹ್ಯಾ ಹುಕುಮಾತ್ ಮಿಳಲ್ಲೆ ಹಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:9
13 ತಿಳಿವುಗಳ ಹೋಲಿಕೆ  

ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆ ಆಜ್ಞೆ.


ಅದಕ್ಕೆ ಅವನು, “‘ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು’ ಮತ್ತು ‘ನೀನು ನಿನ್ನನ್ನು ಪ್ರೀತಿಸುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು’ ಎಂದು ಬರೆದಿದೆ” ಎಂಬುದಾಗಿ ಹೇಳಿದನು.


‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.


ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.


ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು