ರೋಮಾಪುರದವರಿಗೆ 14:1 - ಪರಿಶುದ್ದ ಬೈಬಲ್1 ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ವಿಶ್ವಾಸದಲ್ಲಿ ಸ್ಥಿರವಿಲ್ಲದವರನ್ನೂ ನಿಮ್ಮ ಸಂಗಡ ಸೇರಿಸಿಕೊಳ್ಳಿರಿ. ಆದರೆ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ವಾಗ್ವಾದ ನಡೆಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಂಬಿಕೆಯಲ್ಲಿ ದೃಢವಿಲ್ಲದವರನ್ನೂ ಸೇರಿಸಿಕೊಳ್ಳಿರಿ. ಆದರೆ ಸಂದೇಹಾಸ್ಪದವಾದ ಕಾರ್ಯಗಳನ್ನು ಅವರ ಮುಂದೆ ಚರ್ಚಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ವಿಶ್ವಾಸಾತ್ ಘಟ್ ನಸಲ್ಲ್ಯಾಕ್ನಿ ತುಮಿ ಸ್ವಾಗತ್ ಕರಾ, ಖರೆ ತೆಂಚ್ಯಾ ಅಬಿಪ್ರಾಯಾಂಚ್ಯಾ ವಿಶಯಾತ್ ತೆಂಚೆಕ್ನಾ ವಾದ್ ಖೆಳುಕ್ ಜಾವ್‍ನಕಾಶಿ. ಅಧ್ಯಾಯವನ್ನು ನೋಡಿ |
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.
ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”